ವಿಶ್ವೇಶ್ವರಯ್ಯನವರ ಬದುಕು ನಮಗೆಲ್ಲ ಮಾದರಿ

15bkl2 KASAPA
Published on

ಭಟ್ಕಳ: ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆರ್​ಎನ್​ಎಸ್ ಪಾಲಿಟೆಕ್ನಿಕ್ ಕಾಲೇಜ್ ಮುರ್ಡೆಶ್ವರದ ಸಹಯೋಗದಲ್ಲಿ ಕಸಾಪ ಸಂಸ್ಥಾಪಕರಲ್ಲೊಬ್ಬರಾದ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಹಿನ್ನೆಲೆಯಲ್ಲಿ ಸರ್.ಎಂ. ವಿಶ್ವೇಶ್ವರಯ್ಯನವರ ಸಂಸ್ಮರಣೆ ಕಾರ್ಯಕ್ರಮ ಸ್ಥಳೀಯ ಆರ್.ಎನ್.ಎಸ್. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಿತು.

ಆರ್​ಎನ್​ಎಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ದಿನೇಶ ಗಾಂವಕರ್ ಮಾತನಾಡಿ, ವಿಶ್ವೇಶ್ವರಯ್ಯ ಅವರು ಈ ನಾಡಿಗೆ ಕೊಟ್ಟ ಕೊಡುಗೆ ಶಾಶ್ವತವಾಗಿ ನೆನಪಿಡುವಂಥದ್ದು. ಕನ್ನಡ ನಾಡು ನುಡಿಯ ಕುರಿತು ಅಪಾರ ಅಭಿಮಾನ ಹೊಂದಿದ್ದ ಅವರು ಸಾಹಿತ್ಯ ಪರಿಷತ್ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಬದುಕು ಸಾಧನೆ ನಮಗೆಲ್ಲ ಪ್ರೇರಣೆಯಾಗಿದೆ. ವಿದ್ಯಾರ್ಥಿಗಳು ಅವರ ಬದುಕು ಮತ್ತು ಸಾಧನೆಯಿಂದ ಪ್ರೇರಿತರಾಗಿ ಸಾಧಕರಾಗಬೇಕಿದೆ ಎಂದರು.

ಆರ್​ಎನ್​ಎಸ್ ಪಾಲಿಟೆಕ್ನಿಕ್ ಕಾಲೇಜ್ ಪ್ರಾಂಶುಪಾಲ ಸಂತೋಷ ಆರ್.ಎ., ಸಾಹಿತಿ ಮಾನಾಸುತ ಶಂಭು ಹೆಗಡೆ ಕನ್ನಡನಾಡಿಗೆ ವಿಶ್ವೇಶ್ವರಯ್ಯ ಅವರ ಕೊಡುಗೆಗಳ ಕುರಿತು ಮಾತನಾಡಿದರು. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಾಯಿತು.

ಕಸಾಪ ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ ಕಾಲೇಜಿನ ಉಪಪ್ರಾಂಶುಪಾಲ ಕೆ. ಮರಿಸ್ವಾಮಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಶಂಕರ ನಾಯ್ಕ, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಪಿ. ಭಂಡಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net