ಸಾಲಿಗ್ರಾಮ ದೇವಳದಲ್ಲಿ ವಿಟ್ಲಪಿಂಡಿ ಮಹೋತ್ಸವ

saligrama
ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳದಲ್ಲಿ ಬುಧವಾರ ವಿಟ್ಲಪಿಂಡಿ ಆಚರಿಸಲಾಯಿತು. ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ ಮತ್ತಿತರರು ಇದ್ದರು.
Published on

ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದಲ್ಲಿ ಬುಧವಾರ ವಿಟ್ಲಪಿಂಡಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ದೇವರು ಪಲ್ಲಕಿ ಉತ್ಸವ ಮೆರವಣಿಗೆಯಲ್ಲಿ ಮೊಸರುಕುಡಿಕೆ ಒಡೆಯುತ್ತ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ಗ್ರಾಮಸ್ಥರಿಂದ ಪೂಜೆ ಸ್ವೀಕರಿಸಿ ಶ್ರೀ ಆಂಜನೇಯ ದೇವಳಕ್ಕೆ ಬಂದು ಅಷ್ಟಾವಧಾನ ಪೂಜೆ ಪೂರೈಸಿ ನಂತರ ದೇವಳಕ್ಕೆ ಹಿಂತಿರುಗಲಾಯಿತು. ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೂಟ ಮಹಾಜಗತ್ತು ಸಾಲಿಗ್ರಾಮ ಅಧ್ಯಕ್ಷ ಶ್ರೀಪತಿ ಅಧಿಕಾರಿ ಮತ್ತಿತರರು ಉತ್ಸವದಲ್ಲಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net