ಬಾಲಕಿಗೆ ಕಿರುಕುಳ, ಪೋಕ್ಸೋ ಕೇಸ್

Published on

ವಿಟ್ಲ: ಮಾಣಿಲ ಗ್ರಾಮದ ವ್ಯಕ್ತಿಯೊಬ್ಬ ಅಪ್ರಾಪ್ತೆ ಜತೆ ಅಸಭ್ಯವಾಗಿ ವರ್ತಿಸಿದ ಹಿನ್ನಲೆಯಲ್ಲಿ ವಿಟ್ಲ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೋಕ್ಸೋ ಪ್ರಕರಣ ದಾಖಲಾಗಿದೆ.

೧೬ ವರ್ಷದ ಬಾಲಕಿ ಜತೆಅನುಚಿತವಾಗಿ ವರ್ತಿಸಿ, ಕೀಳುಮಟ್ಟದ ಶಬ್ದಗಳನ್ನು ಬಳಸಿದ್ದಾರೆಂಬ ಆರೋಪದಲ್ಲಿ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಹೇಶ್ ಭಟ್ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಮಾಹಿತಿ ಹೊರ ಬರುತ್ತಿದ್ದಂತೆ ಕೃತ್ಯ ಎಸಗಿದಾತ ತಲೆಮರೆಸಿಕೊಂಡಿದ್ದಾನೆ. ಬಾಲಕಿಯ ಪೋಷಕರು ಕೂಲಿ ಕೆಲಸ ಮಾಡಿಕೊಂಡಿದ್ದು, ಎರಡು ತಿಂಗಳು ಬಾಲಕಿ ಶಾಲೆಗೆ ಹೋಗಿಲ್ಲ ಎಂದು ಹೇಳಲಾಗುತ್ತಿದೆ.

ಶಾಲೆಯಿಂದ ಶಿಕ್ಷಕರು ವಿಚಾರಿಸುವ ನಿಟ್ಟಿನಲ್ಲಿ ಹೋಗಿದ್ದಾಗ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ ಹೊರತು ಬಾಲಕಿಯ ಭೇಟಿಗೆ ಅವಕಾಶ ನೀಡಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕೆಂಬ ಆಗ್ರಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net