ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಲ್ಲ ಪಕ್ಷದವರನ್ನು ಸೇರಿಸಿಕೊಂಡು ರಾಜಕೀಯ ರಹಿತವಾಗಿ ಹೋರಾಟ ಮಾಡಲಾಗುವುದು. ಈಗಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಗೆ ಮನವಿ ಮಾಡಿದ್ದೇವೆ. ಬಂಟ್ವಾಳ ಶಾಸಕ ರಾಜೇಶ್ ನಾಕ್ ಅವರಿಗೂ ಮನವಿ ನೀಡಲಾಗುವುದು. ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಮಾಡಲಾಗಿದೆ. ಬಂಟ್ವಾಳ ತಾಲೂಕು ೭೫ ಗ್ರಾಮಗಳನ್ನು ಹೊಂದಿದ್ದು ಜಿಲ್ಲೆಯಲ್ಲಿ ಅತೀ ದೊಡ್ಡ ತಾಲೂಕಾಗಿದೆ. ಅದನ್ನು ವಿಭಜಿಸಿ ವಿಟ್ಲ ತಾಲೂಕು ರಚನೆ ಮಾಡಬೇಕು. ಹಿಂದೆ ಇದ್ದ ವಿಟ್ಲ ವಿಧಾನಸಭಾ ಕ್ಷೇತ್ರವನ್ನು ಮರಳಿ ಪಡೆಯುವ ನಿಟ್ಟಿನಲ್ಲಿಯೂ ಹೋರಾಟ ಮುಂದುವರಿಯಲಿದೆ ಎಂದರು.