ಬೃಹತ್ ತ್ಯಾಜ್ಯ ಉತ್ಪಾದಕರ ನೋಂದಣಿ ಸಂಬಂಧ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ವಿಟ್ಲ ಪಪಂ ಮುಖ್ಯಾಧಿಕಾರಿ ಕರುಣಾಕರ ವಿ. ಮಾನತಾಡಿದರು. ಕರುಣಾಕರ ನಾಯ್ತೊಟ್ಟು, ಅಶೋಕ್ ಕುಮಾರ ಶೆಟ್ಟಿ, ಸಂಗೀತಾ ಪಾಣೆಮಜಲು ಇದ್ದರು.
ವಿಟ್ಲ: ಘನತ್ಯಾಜ್ಯ ನಿರ್ವಹಣಾ ನಿಯಮ-೨೦೨೬ ಕಟ್ಟುನಿಟ್ಟು ಜಾರಿಗೆ ಎಲ್ಲರ ಸಹಕಾರ ಅಗತ್ಯ. ದಿನಕ್ಕೆ ೧೦೦ ಕೆ.ಜಿ.ಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ತ್ಯಾಜ್ಯ ಉತ್ಪಾದಕರನ್ನು ಬೃಹತ್ ತ್ಯಾಜ್ಯ ಉತ್ಪಾದಕರೆಂದು ಗುರುತಿಸಲಾಗುವುದು. ಈ ಸಂಬಂಧ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಕರುಣಾಕರ ವಿ. ಹೇಳಿದರು.
ವಿಟ್ಲ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಬೃಹತ್ ತ್ಯಾಜ್ಯ ಉತ್ಪಾದಕರ ನೋಂದಣಿ ಸಂಬಂಧ ಮದುವೆ ಮತ್ತಿತರ ಸಮಾರಂಭ ನಡೆಸುವ ಸಭಾಂಗಣದ ಮಾಲೀಕರರಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಮಾತನಾಡಿ, ತ್ಯಾಜ್ಯ ನಿರ್ವಹಣೆಯನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಪ್ರತಿಯೊಬ್ಬರೂ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ ಶೆಟ್ಟಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು ಉಪಸ್ಥಿತರಿದ್ದರು. ಆರೋಗ್ಯ ವಿಭಾಗದ ಲೋಕೇಶ್, ಲ್ಯಾನ್ಸಿ ಕಾರ್ಯಕ್ರಮ ನಿರ್ವಹಿಸಿದರು.