ಟೀಂ ಮೈಸೂರಿನಿಂದ ವಿವೇಕ ಜಯಂತಿ

mys
Published on

ಮೈಸೂರು: ಟೀಂ ಮೈಸೂರು ಪ್ರತಿಷ್ಠಾನ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಪ್ರಯುಕ್ತ ‘ನಿಮಗೆ ತಿಳಿದಂತೆ ಸ್ವಾಮಿ ವಿವೇಕಾನಂದರು’ ವಿಷಯದ ಕುರಿತು ಇತ್ತೀಚೆಗೆ ಲಕ್ಷ್ಮೀಪುರಂನ ಗೋಪಾಲಸ್ವಾಮಿ ಶಿಶುವಿಹಾರ ಮತ್ತು ಪಿಯು ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.

ಏಳನೇ ತರಗತಿಯಿಂದ ಹತ್ತನೇ ತರಗತಿ ಹಾಗೂ ಪಿಯುಸಿಯಿಂದ ಪದವಿಯವರೆಗೆ ಎರಡು ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ ನೀಡಲಾಗಿತ್ತು. ವಿವಿಧ ಶಾಲೆ, ಕಾಲೇಜುಗಳಿಂದ 80 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ವಿದ್ಯಾರ್ಥಿಗಳಿಗೆ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತೀರ್ಪುಗಾರರಾಗಿ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಪರಮೇಶ.ಕೆ.ಉತ್ತನಹಳ್ಳಿ, ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಕನ್ನಡ ಉಪನ್ಯಾಸಕ ಸಿ.ಎಸ್. ರಾಘವೇಂದ್ರ ಕಾರ್ಯನಿರ್ವಹಿಸಿದರು. ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಗೋಪಾಲಸ್ವಾಮಿ ಸಂಸ್ಥೆಯ ಕರೆಸ್ಪಾಂಡೆಂಟ್ ಎನ್.ಆರ್. ಮಂಜುನಾಥ್, ಟೀಂ ಮೈಸೂರು ಪ್ರತಿಷ್ಠಾನ ಪದಾಧಿಕಾರಿಗಳಾದ ಹಿರಿಯಣ್ಣ, ಗಣೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net