ಷಟ್ಲ್ ಬ್ಯಾಡ್ಮಿಂಟನ್‌ನಲ್ಲಿ ವಿವೇಕಾನಂದ ಕಾಲೇಜು ಜಿಲ್ಲಾಮಟ್ಟಕ್ಕೆ ಆಯ್ಕೆ

shuttle
ಪುತ್ತೂರು ತಾಲೂಕು ಮಟ್ಟದ ಷಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ.
Published on

ಪುತ್ತೂರು ಗ್ರಾಮಾಂತರ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಪುತ್ತೂರಿನ ಅಂಬಿಕಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಷಟ್ಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು., ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಯಶಸ್ ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಹರ್ಷಿತಾ, ವಿಜ್ಞಾನ ವಿಭಾಗದ ಶ್ರೇಯಾ ರಾವ್, ಅಂಶಿ ಎ.ಶೆಟ್ಟಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net