ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

3blrp2
ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಉಪನ್ಯಾಸಕರು ಇದ್ದಾರೆ.
Published on

ಬೇಲೂರು: ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೇಲೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಲೋಹಿತ್, ನವೀನ್, ಸಾಗರ್, ಪ್ರೀತಮ್, ಪೂರ್ಣೇಶ್, ಅಭಿನಯ್ ಅವರನ್ನು ವಿವೇಕಾನಂದ ಎಜುಕೇಷನ್ ಸಂಸ್ಥೆ ಕಾರ್ಯದರ್ಶಿ ಆರ್.ಎಸ್.ಸುಬ್ರಮಣ್ಯ, ಪ್ರಾಂಶುಪಾಲ ಶಿವಕುಮಾರ್, ಮುಖ್ಯಶಿಕ್ಷಕ ಗಂಗೇಗೌಡ, ದೈಹಿಕ ಶಿಕ್ಷಣ ಉಪನ್ಯಾಸಕ ವಿಜಯ್, ಪ್ರಕಾಶ್, ಕ್ರೀಡಾ ಕಾರ್ಯದರ್ಶಿ ಸಿದ್ದಪ್ಪ ಹಾಗೂ ಕಾಲೇಜು ಉಪನ್ಯಾಸಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net