ವಿವೇಕಾನಂದರು ಸ್ಫೂರ್ತಿ

12npn2
Published on

ನಿಪ್ಪಾಣಿ: ವಿವೇಕಾನಂದರ ಜೀವನ ಮೌಲ್ಯಗಳು ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿವೆ ಎಂದು ಮರಾಠಿ ವಿಭಾಗದ ಮುಖ್ಯಸ್ಥ ಡಾ.ಎಸ್.ಎಂ.ರಾಯಮಾನೆ ಹೇಳಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ಜಿ.ಐ.ಬಾಗೇವಾಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಚಾರ್ಯ ಡಾ.ಎಂ.ಎಂ.ಹುರಳಿ ಮಾತನಾಡಿದರು.

ಐಕ್ಯೂಎಸಿ ಸಂಯೋಜಕ ಡಾ.ಅತುಲಕುಮಾರ ಕಾಂಬಳೆ, ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಜಿ.ಖರಾಬೆ, ಸುಧೀರ ಕೋಠಿವಾಲೆ, ಡಾ. ಬಿ.ಎಂ.ಜನಗೌಡ, ಎನ್‌ಸಿಸಿ ಅಧಿಕಾರಿ ಸಿದ್ದು ಉದಗಟ್ಟಿ, ವಿಜಯ ಪವಾರ, ಎನ್‌ಸಿಸಿ, ಎನ್‌ಎಸ್‌ಎಸ್ ಸ್ವಯಂ ಸೇವಕರು ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net