ಯುವಕರಿಗೆ ಅಗತ್ಯ ಧಾರ್ಮಿಕ ವಿಚಾರ - ಈಶ್ವರ ಭಟ್ ಪಂಜಿಗುಡ್ಡೆ ಹೇಳಿಕೆ - ವಿವೇಕಾನಂದ ಜಯಂತಿ

PTR_15 JAN_5
Published on

ಪುತ್ತೂರು: ಯುವ ಸಮುದಾಯ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ, ಸಾಮಾಜಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದ್ದು, ಹಿರಿಯರು ಪ್ರೋತ್ಸಾಹಿಸುವ ಅಗತ್ಯವಿದೆ. ಸಮಾಜದ ತಪ್ಪುಗಳಿಗೆ ಟೀಕೆಯನ್ನೇ ಮಾಡದೆ ಸಲಹೆ ನೀಡುವ ಪ್ರವೃತ್ತಿ ನಮ್ಮಲ್ಲಿ ಬೆಳೆಯಬೇಕು. ಕೆಲವು ಸ್ವಾರ್ಥಿಗಳು ಕುರ್ಚಿ ಉಳಿಸಲು ಯುವ ಸಮುದಾಯವನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸಹಯೋಗದಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ತಾಲೂಕು ಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ ಭಾಗವಹಿಸಿದರು. ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಽಕಾರಿ ನವೀನ್ ಭಂಡಾರಿ ವಹಿಸಿದ್ದರು.

ನಗರಸಭೆ ಉಪಾಧ್ಯಕ್ಷ ಬಾಲಚಂದ್ರ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ರೋಟರಿ ಕ್ಲಬ್ ಪ್ರಮುಖರಾದ ಸೂರ್ಯನಾಥ ಆಳ್ವ, ಪಿ.ಎಂ.ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪುತ್ತೂರು ಮೇಲ್ವಿಚಾರಕ ಶ್ರೀಕಾಂತ್ ಬಿರಾವು ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾರ್ಯದರ್ಶಿ ವಸಂತ್ ಶಂಕರ್ ವಂದಿಸಿದರು. ಡಾ.ರಾಮಚಂದ್ರ ಕಾರ್ಯಕ್ರಮ ನಿರ್ವಹಿಸಿದರು.

ಸಾಧಕರಿಗೆ, ಸಂಸ್ಥೆಗಳಿಗೆ ಪ್ರಶಸ್ತಿ

ವೈಯಕ್ತಿಕ ವಿಭಾಗದಲ್ಲಿ ಬಾಲಕೃಷ್ಣ ಪೊರ್ದಾಳ್, ಕೃಷ್ಣಪ್ಪ, ನವೀನ್ ರೈ ಬನ್ನೂರು, ಪ್ರಣವ ಭಟ್, ಭವ್ಯಾ ಪುತ್ತೂರು, ಸಂಘಟನೆಯ ವಿಭಾಗದಲ್ಲಿ ಆನಡ್ಕ ವಿಷ್ಣು ಯುವಕ ಮಂಡಲ, ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲ, ಬಲ್ನಾಡು ವಿನಾಯಕ ಸ್ಪೋರ್ಟ್ಸ್ ಕ್ಲಬ್, ಓಜಾಲ ವಾಸುಕಿ ಸ್ಪೋರ್ಟ್ಸ್ ಕ್ಲಬ್, ಅಡ್ಯಾಲು ಮೊಸರು ಕುಡಿಕೆ ಸಮಿತಿ, ಸರ್ವೆ ಗೌರಿ ಮಹಿಳಾ ಮಂಡಲ, ಬನ್ನೂರು ಸೂರ್ತಿ ಬಾಲಸಭಾ, ಶಿವನಗರ ಶಿವಮಣಿ ಬಾಲ ಸಮಿತಿ, ಅತ್ಯುತ್ತಮ ಎನ್‌ಎಸ್‌ಎಸ್ ಘಟಕವಾಗಿ ಸಂತ ಫಿಲೋಮಿನಾ ಪದವಿ ಕಾಲೇಜು ಘಟಕಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net