

ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶನಿವಾರ (ಜೂ.29) ಸಂಜೆ 5.30ಕ್ಕೆ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರಿಗೆ ಜೀವಮಾನ ಸಾಧನೆಯ ಅಭಿನಂದನೆ ಹಾಗೂ ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಸಮಾರಂಭ
ಆಯೋಜಿಸಲಾಗಿದೆ. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾ. ಟಿ.ಜಿ. ಶಿವಶಂಕರೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಸಚಿವರ ಕೃಷ್ಣಭೈರೇಗೌಡ, ಮಾಜಿ ಸಚಿವ ಸಿ.ಟಿ. ರವಿ, ರಾಜಸ್ಥಾನದ ಐಜಿಪಿ ರಾಘವೇಂದ್ರ ಸುಹಾಸ್, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಸಜೀತ್, ಐಗಾಟ್‌ನ ನಿರ್ದೇಶಕ ಡಾ. ಎನ್.ಎಸ್. ನಾಗೇಶ್, ಐಎಎಸ್ ಅಧಿಕಾರಿಗಳಾದ ಪ್ರದೀಪ್ ಪ್ರಭಾಕರ್, ಎನ್. ಮಂಜುಶ್ರೀ ಇತರರು ಭಾಗವಹಿಸಲಿದ್ದಾರೆ.