

ಗಂಗೊಳ್ಳಿ: ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಮಂಗಳವಾರ ನಡೆಯಿತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲೆ ಸುಜಾತಾ ಎಂ. ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಮಾಜಿ ಸದಸ್ಯ ಜಗದೀಶ ಪೂಜಾರಿ, ಸಿಬಿಸಿ ಕಾರ‌್ಯಾಧ್ಯಕ್ಷ ಪ್ರವೀಣ ಪೂಜಾರಿ, ಸದಸ್ಯರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜೀವನ್ ಕುಮಾರ್ ಶೆಟ್ಟಿ, ಉಪನ್ಯಾಸಕರು, ಶಿಕ್ಷಕರು, ದೈಹಿಕ ಶಿಕ್ಷಣ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾವಿತ್ರಿ ಸ್ವಾಗತಿಸಿದರು. ಶ್ರೀಲಕ್ಷ್ಮೀ ವಂದಿಸಿದರು. ಗಣೇಶ ಎಂ. ಕಾರ‌್ಯಕ್ರಮ ನಿರೂಪಿಸಿದರು.
ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡಗಳು ಪ್ರಶಸ್ತಿ ವಿಜೇತವಾಗಿವೆ. ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕ- ಬಾಲಕಿಯರ ತಂಡಗಳು ರನ್ನರ್‌ಅಪ್ ಪ್ರಶಸ್ತಿ ಪಡೆದುಕೊಂಡಿವೆ.