

ಬೆಳ್ತಂಗಡಿ: ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ವತಿಯಿಂದ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗಮಟ್ಟದ ವಾಲಿಬಾಲ್ ಟೂರ್ನಿ ಸಂಪನ್ನಗೊಂಡಿತು.
ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆ ವಹಿಸಿದ್ದರು. ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಸಂಚಾಲಕ ನಾಮದೇವ ರಾವ್ ಉಪಸ್ಥಿತರಿದ್ದರು. 8 ಜಿಲ್ಲೆಗಳಿಂದ 32 ತಂಡಗಳ 600 ಕ್ರೀಡಾಪಟುಗಳು ಭಾಗವಹಿಸಿದ್ದರು.
ವಿಜೇತರ ವಿವರ
17ರ ಬಾಲಕಿಯರ ವಿಭಾಗದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡ (ಪ್ರಥಮ), 17ರ ವಯೋಮಾನದ ಬಾಲಕರ ವಿಭಾಗದ ಹಾಸನ ಜಿಲ್ಲೆಯ ಮಂಗಳೂರು ಪಬ್ಲಿಕ್ ಸ್ಕೂಲ್ನ ಬಾಲಕರ ತಂಡ (ಪ್ರಥಮ), 14ರ ವಯೋಮಾನದ ಬಾಲಕರ ವಿಭಾಗದಲ್ಲಿ ದ.ಕ. ಜಿಲ್ಲೆಯ ಪುತ್ತೂರಿನ ಬಾಲಕರ ತಂಡ (ಪ್ರಥಮ), 14ರ ವಯೋಮಾನದ ಬಾಲಕಿಯರ ವಿಭಾಗದದಲ್ಲಿ ಹಾಸನ ಜಿಲ್ಲೆಯ ಅರಕಲಗೂಡಿನ ಬಾಲಕಿಯರ ತಂಡ (ಪ್ರಥಮ ) ಸ್ಥಾನ ಗಳಿಸಿಕೊಂಡಿದೆ.