ವಾಲಿಬಾಲ್ ಪಂದ್ಯದಲ್ಲಿ ಕಂಚಿನ ಪದಕ

24 GVT 06
ಕಲಬುರಗಿಯಲ್ಲಿ ಆಯೋಜಿಸಿದ್ದ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಂಚಿನ ಪದಕ ಪಡೆದ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸೂರಿಬಾಬು ನೆಕ್ಕಂಟಿ, ಉಪಾಧ್ಯಕ್ಷ ನೆಕ್ಕಂಟಿ ಆದರ್ಶ, ಆಡಳಿತ ನಿರ್ದೇಶಕ ಹೆಚ್.ಕೆ ಚಂದ್ರಮೋಹನ್, ಸಿಇಓ ನರೇಶ, ಶಾಲೆಯ ಶೈಕ್ಷಣಿಕ ಮುಖ್ಯಸ್ಥೆ ಎಸ್. ಕಷ್ಣವೇಣಿ ಇತರರಿದ್ದರು.
Published on

ಗಂಗಾವತಿ: ಕಲಬುರಗಿಯಲ್ಲಿ ಆಯೋಜಿಸಿದ್ದ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಕಂಚಿನ ಪದಕ ಪಡೆದುಕೊಂಡಿದ್ದಾರೆ.

19 ವರ್ಷದೊಳಗಿನ ಮತ್ತು 17 ವರ್ಷದೊಳಗಿನ ಬಾಲಕಿಯರ ವಾಲಿಬಾಲ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು, ಎಲ್ಲ ವಿಭಾಗದಲ್ಲಿ ಶ್ರೇಷ್ಠತೆ ಸಾಧಿಸಿದರು.

ಈ ಬಗ್ಗೆ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸೂರಿಬಾಬು ನೆಕ್ಕಂಟಿ ಮಾತನಾಡಿ, ಪಠ್ಯದೊಂದಿಗೆ, ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಉತ್ತಮ ಸಾಧನೆಯೊಂದಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪ್ರತಿನಿಧಿಸುವಂತೆ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net