ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ

wolliball
ವಾಲಿಬಾಲ್ ಪಂದ್ಯಾವಳಿ
Published on

ವಿಜಯವಾಣಿ ಸುದ್ದಿಜಾಲ ಸೂಲಿಬೆಲೆ
ವಿದ್ಯಾರ್ಥಿ ದಿಸೆಯಲ್ಲಿ ಹೆಚ್ಚಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಚನ್ನಪ್ಪ ಹೇಳಿದರು.
ಸೂಲಿಬೆಲೆ ವಿವೇಕಾನಂದ ಪ್ರೌಢಶಾಲೆ ಆವರಣದಲ್ಲಿ ನೆಹರು ಯುವ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯುವ ಸಪ್ತಾಹ ದಿನದ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಫಿಟ್‌ನೆಸ್ ಡೇ ಕಾರ್ಯಕ್ರಮದಲ್ಲಿ ವಾಲಿಬಾಲ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲ ಕ್ರೀಡೆಗಳಲ್ಲೂ ಪಾಲ್ಗೊಂಡು ಶಾಲೆಗೆ ಕೀರ್ತಿ ತರಬೇಕು ಎಂದರು.
ವಿವೇಕಾನಂದ ಪ್ರೌಢಶಾಲೆ ಪ್ರಭಾರಿ ಮುಖ್ಯಶಿಕ್ಷಕ ಡಿ.ನಾರಾಯಣಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜ್ಞಾನ ಮತ್ತು ಆರೋಗ್ಯ 2 ಲಾಭಗಳನ್ನು ಪಡೆಯಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net