

ವಿಜಯವಾಣಿ ಸುದ್ದಿಜಾಲ ಹೆಬ್ರಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಹೆಬ್ರಿಯ ಪಾಂಡುರಂಗ ರಮಣ ನಾಯಕ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಕಳ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.
ಹೆಬ್ರಿ ಗ್ರಾಪಂ ಅಧ್ಯಕ್ಷ ತಾರಾನಾಥ ಎಸ್.ಬಂಗೇರ ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ ಬೆಳೆಯಲು ಆಟಗಳು ಅಗತ್ಯ ಎಂದರು.
ಅಮೃತ ಭಾರತಿ ಟ್ರಸ್ಟ್ನ ಸ್ಥಾಪಕ ಅಧ್ಯಕ್ಷ ಸತೀಶ್ ಪೈ ಹೆಬ್ರಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ರಾಮಾನಂದ ಶೆಟ್ಟಿ, ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಎಚ್.ಗುರುದಾಸ್ ಶೆಣೈ, ಸದಸ್ಯ ಲಕ್ಷ್ಮಣ ಭಟ್ ಶಿವಪುರ, ಅಮೃತ ಭಾರತಿ ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ಪದವಿ ಪೂರ್ವ ಕಾಲೇಜು ಸಂಚಾಲಕ ರಾಜೇಶ್ ನಾಯಕ್, ಅಮೃತ ಭಾರತಿ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಅಪರ್ಣ ಆಚಾರ್, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶಕುಂತಲಾ, ಪ್ರಾಂಶುಪಾಲ ಅರುಣ ಎಚ್.ವೈ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ವಂದಿಸಿದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ ನಿರೂಪಿಸಿದರು.