Volleyball tournament kicks off

05mdk02
ಹುಲುಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ವಾಲಿಬಾಲ್ ಪಂದ್ಯಾವಳಿ ಕ್ರೀಡಾಪ್ರೇಮಿಗಳನ್ನು ಸೆಳೆಯುತ್ತಿದೆ.
Published on

 ಕುಶಾಲನಗರ: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿರುವ ಹುಲುಸೆ ಫ್ರೆಂಡ್ಸ್ ವತಿಯಿಂದ ಎಚ್‌ವಿಎಲ್ 2024-25ನೇ ಸಾಲಿನ ಲೀಗ್ ಮಾದರಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹುಲುಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶನಿವಾರ ಆರಂಭಗೊಂಡಿತು.

ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದಾಗಿ ಯುವಕರು ಒಂದೆಡೆ ಸೇರುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಗ್ರಾಮೀಣ ಯುವಕರಿಗೆ ಕ್ರೀಡೆಯ ಬಗ್ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸಹಕಾರಿಯಾಗುತ್ತದೆ. ಇದರ ಮುಖೇನ ಯುವಕರು ಸಂಘಟನೆಯ ಮನೋಭಾವದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರವಾಗುವುದು ಎಂದರು.

ಕೂಡಿಗೆ ಕ್ರೀಡಾಪಟು ಚಂದ್ರಶೇಖರ್, ಹರೀಶ್, ಹುಲುಸೆ ಫ್ರೆಂಡ್ಸ್ ಪದಾಧಿಕಾರಿಗಳಾದ ದಿಲೀಪ್, ದರ್ಶನ್, ಗೌತಮ್, ಚಂದು, ಶಂಕರ್, ಅಭಿ, ಸಮಿತಿಯ ಸದಸ್ಯರು, ಲೀಗ್‌ನ ಎಲ್ಲ ಕ್ರೀಡಾಪಟುಗಳು ಭಾಗವಹಿಸಿದ್ದರು. ವಾಲಿಬಾಲ್ ಪಂದ್ಯಾವಳಿಗಳು ಲೀಗ್ ಮಾದರಿಯಲ್ಲಿ ನಡೆಯುತ್ತಿದ್ದು ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕಿಗೆ ಸೀಮತವಾಗಿ ಆಯೋಜಿಸಲಾಗಿದೆ. ರಾಜ್ಯ ಮಟ್ಟದ ಕ್ರೀಡಾಪಟುಗಳು ಸಹ ಭಾಗವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net