ಡಿ೧೭ ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

4a1b19f3-b5c2-4945-915f-7d7666ad1277
Published on

ಮಡಿಕೇರಿ: ಯುವ ಕಾಂಗ್ರೆಸ್ ನಾಪೋಕ್ಲು ಬ್ಲಾಕ್ ಹಾಗೂ ಚೆರಿಯಪರಂಬು ಕಲ್ಲುಮೊಟ್ಟೆ ಯುವ ಕಾಂಗ್ರೆಸ್ ಸಂಯುಕ್ತಾಶ್ರಯದಲ್ಲಿ ಡಿ೧೭ ರಂದು ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ(ಯೂತ್ ಕಾಂಗ್ರೆಸ್ ಕಪ್ ೨೦೨೨) ನಾಪೋಕ್ಲು-ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬ್ಲಾಕ್ ಅಧ್ಯಕ್ಷ ಪರವಂಡ ಸಿರಾಜ್ ತಿಳಿಸಿದರು.


ಸಂಜೆ ೪ ಗಂಟೆಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಡಿದ ಮೂವರು ಅತಿಥಿ ಆಟಗಾರರೊಂದಿಗೆ ನಾಕೌಟ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ೧೨ ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ೫೦,೦೦೦ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.೩೦,೦೦೦ ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ಇತರ ವೈಯಕ್ತಿಯ ಬಹುಮಾನಗಳು ನೀಡಲಾಗುವುದು. ಇದೇ ಸಂದರ್ಭ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಗ್ರಾಮದವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಪಂದ್ಯಾವಳಿಗೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದ ಅವರು, ಹೆಚ್ಚಿನ ಮಾಹಿತಿಗೆ ೯೯೬೪೬೪೬೪೩೧ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ನಾಪೋಕ್ಲು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್, ಎನ್.ಎಸ್.ವಿ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಾಶೀದ್, ಚೆರಿಯಪರಂಬು-ಕಲ್ಲುಮೊಟ್ಟೆ ಯುವ ಕಾಂಗ್ರೆಸ್ ಪ್ರಮುಖರಾದ ಪಿ.ಎಂ.ಸಮೀರ್, ಯಶವಂತ್(ಶಶಿ), ಮನಝೀರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net