26ಕ್ಕೆ ಸ್ವಯಂಪ್ರೇರಿತ ರಕ್ತದಾನ ಶಿಬಿರ

19 tth 02 (1)
ತೀರ್ಥಹಳ್ಳಿ ಛತ್ರಕೇರಿಯಲ್ಲಿ ಸಿದ್ದಿವಿನಾಯಕ ಸೇವಾ ಸಮಿತಿ ಪ್ರತಿಷ್ಠಾಪಿಸಿರುವ ಗಣಪತಿ ಮೂರ್ತಿ.
Published on

ತೀರ್ಥಹಳ್ಳಿ: ಕಳೆದ 40 ವರ್ಷಗಳಿಂದ ವಿಭಿನ್ನವಾಗಿ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿರುವ ಪಟ್ಟಣದ ಛತ್ರಕೇರಿ ಸಿದ್ದಿವಿನಾಯಕ ಸೇವಾ ಸಮಿತಿಯು ಕೇವಲ ಧಾರ್ಮಿಕ ಕಾರ್ಯಗಳಿಗೆ ಸೀಮಿತವಾಗಿರದೆ ಸಾಮಾಜಿಕ, ಸಾಂಸ್ಕೃತಿಕ ಮತ್ತು ಉಚಿತ ಆರೋಗ್ಯ ಶಿಬಿರ ಆಯೋಜಿಸುತ್ತಿದೆ. ಬಡಾವಣೆಯ ಜನರನ್ನು ಒಗ್ಗೂಡಿಸಿ ಪರಿಸರ ಸ್ವಚ್ಛತೆ ಅಭಿಯಾನ ಹಮ್ಮಿಕೊಳ್ಳುತ್ತಿದೆ. ಸ್ಥಳೀಯ ಪ್ರತಿಭೆಗಳನ್ನು ಉತ್ತೇಜಿಸುವ ಜತೆಗೆ ನಾಡಿನ ಖ್ಯಾತ ಕಲಾವಿದರಿಂದ ಮನರಂಜನೆ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ ಮಾಡಲಾಗುತ್ತಿದೆ. 40ನೇ ವರ್ಷದ ನೆನಪಿಗಾಗಿ ಈ ವರ್ಷ 15 ದಿನ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಸೆ.26ರಂದು ಸಮಿತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸೆ.30ರಂದು ಸಂಜೆ ಖ್ಯಾತ ಕಲಾವಿದ ಗಂಗಾವತಿ ಪ್ರಾಣೇಶ್ ಅವರಿಂದ ನಗೆಹಬ್ಬ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net