ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಸೂಚನೆ; ಕರ್ತವ್ಯಲೋಪ ತನಿಖೆಗೆ ಸ್ವಯಂಪ್ರೇರಿತ ದೂರು

21 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು 1911ರಲ್ಲಿ ಕಟ್ಟಿಸಿರುವ ಕೆಲಗೇರಿ ಕೆರೆ ಶತಮಾನ ಕಂಡಿದೆ. ಈ ಕೆರೆಗೆ ಚರಂಡಿ ನೀರು ಸೇರುತ್ತಿದೆ. ಅಂತರಗAಗೆ, ಕಳೆ ಬೆಳೆದು ಕಲುಷಿತಗೊಂಡಿದೆ. 20 ದಿನಗಳೊಳಗೆ ಕೆರೆಯನ್ನು ಸ್ವಚ್ಛಗೊಳಿಸಬೇಕು. ಈಗ ಆಗಿರುವ ಕರ್ತವ್ಯಲೋಪದ ಬಗ್ಗೆ ತನಿಖೆ ನಡೆಸಲು ಲೋಕಾಯುಕ್ತದಿಂದ ಸ್ವಯಂ ದೂರು ದಾಖಲಿಸಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.

ನಗರದ ಕೆಲಗೇರಿ ಕೆರೆಗೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೆರೆ ನಿರ್ವಹಣೆ ಹಾಗೂ ಕೆರೆ ಮಾಲೀಕತ್ವ ವಹಿಸಿಕೊಂಡಿರುವವರನ್ನು ಪ್ರಕರಣದಲ್ಲಿ ಪಾರ್ಟಿ ಮಾಡಲಾಗುವುದು. ಕೆರೆ ನಿರ್ವಹಣೆ ಮತ್ತು ಮಾಲೀಕತ್ವದ ವಿಚಾರದಲ್ಲಿ ಕೃಷಿ ವಿಶ್ವವಿದ್ಯಾಲಯ ಹಾಗೂ ಮಹಾನಗರ ಪಾಲಿಕೆ ಪರಸ್ಪರ ಬೊಟ್ಟು ತೋರಿಸಿ ಸ್ವಚ್ಛತೆ, ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದಾರೆ. ವಾಕಿಂಗ್ ಪಾತ್‌ನಲ್ಲಿ ಗಿಡಗಂಟಿ ಬೆಳೆದಿವೆ. ಕೆರೆ ಸುತ್ತಲಿನ ಜನ ಮನೆಯ ದಿನಬಳಕೆ ತ್ಯಾಜ್ಯ, ಕಸಕಡ್ಡಿಯನ್ನು ಕೆರೆಯಲ್ಲಿ ಹಾಕುತ್ತಿದ್ದಾರೆ. ಈ ಬಗ್ಗೆ ಸಂಬ0ಧಪಟ್ಟವರು ಗಮನ ಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕರ ದೂರು: ಕೆರೆಯ ಸುತ್ತ ಕುಡುಕರ, ಪುಂಡರ ಕಾಟ ಹೆಚ್ಚಾಗಿದೆ. ರಾತ್ರಿ ಎಣ್ಣೆ ಪಾರ್ಟಿ ಮಾಡುತ್ತಾರೆ. ಕೇಳಿದರೆ ಹಲ್ಲೆಗೆ ಮುಂದಾಗುತ್ತಾರೆ. ವೃದ್ಧರು, ಮಹಿಳೆಯರು, ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ಸೂಕ್ತ ಪೊಲೀಸ್ ಬಂದೊಬಸ್ತ್ ನೀಡಬೇಕು. ಪಾಲಿಕೆಯಿಂದ ಕೆರೆಯ ಸುತ್ತ ತಂತಿ ಬೇಲಿ ಅಳವಡಿಸಬೇಕು. ಸಾಧ್ಯವಾದಲ್ಲಿ ಸಿಸಿ ಟಿವಿ ಅಳವಡಿಸಬೇಕು ಎಂದು ಸಾರ್ವಜನಿಕರು ಮನವಿ ಸಲ್ಲಿಸಿದರು. ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ನ್ಯಾ. ಫಣೀಂದ್ರ ಅವರು ಪೊಲೀಸ್ ಅಽಕಾರಿಗಳಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net