ದೇಶದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಚಲಾಯಿಸಿ

ದೇಶದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಚಲಾಯಿಸಿ
Published on

ಕುಶಾಲನಗರ: ದೇಶದ ಬೆಳವಣಿಗೆಗೆ ಹಾಗೂ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿಸಲು ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಕರೆ ನೀಡಿದರು.

ಕುಶಾಲನಗರದ ಕಾರು ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದಲ್ಲಿ ಮಹಿಳೆಯರು, ಹಿಂದುಳಿದ ವರ್ಗ, ಯುವಕರ ಏಳಿಗೆಗಾಗಿ ಮೋದಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ. ಧಾರ್ಮಿಕ ಕ್ಷೇತ್ರಗಳ ವಿಸ್ತಾರ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಜತೆಗೆ ಉತ್ತಮ ಭಾರತ ನಿರ್ಮಾಣಕ್ಕೆ ಮೋದಿ ಸರ್ಕಾರ ಸಮಗ್ರ ಚಿಂತನೆ ಹರಿಸಿದೆ ಎಂದರು.

ಚುನಾವಣೆ ನಂತರ ಮತದಾರರ ಕೈಗೆ ಸಿಗುವುದಿಲ್ಲ ಎಂದು ವಿರೋಧ ಪಕ್ಷಗಳು ದೂರುತ್ತಿವೆ. ಮೈಸೂರಿನಲ್ಲಿ ಈಗಾಗಲೇ ತಮ್ಮ ಕಚೇರಿಯನ್ನು ಅರಮನೆಯಿಂದ ಹೊರಗೆ ಆರಂಭಿಸಲಾಗಿದೆ. ಫಲಿತಾಂಶ ಬಂದು ಗೆದ್ದ ನಂತರ ಮಾಡಿಕೇರಿಯಲ್ಲೂ ಕಚೇರಿ ತೆರೆಯುತ್ತೇವೆ. ಸಮಾಜದ ಕಟ್ಟಕಡೆಯ ಜನರಿಗೂ ಸಿಗುವ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದರು.

ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಎಂಎಲ್ಸಿ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿದರು. ಗೌತಮ್ ಗೌಡ, ಜೆಡಿಎಸ್‌ನ ಎಚ್.ಎಂ.ಚಂದ್ರು, ವಸಂತ್, ಗಿರೀಶ್, ಮಧುಸೂದನ್, ಸುನೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net