ಅರ್ಹರು ತಪ್ಪದೇ ಮತದಾನ ಮಾಡಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ

Vote)
Published on

ಮಂಡ್ಯ: ಅರ್ಹ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ ನೀಡಿದರು.

ನಗರದ ಡಿಸಿ ಕಚೇರಿ ಎದುರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಆಶೋದಯ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಂಬರುವ ವಿಧಾನಸಭೆ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮತದಾರರ ಜಾಗೃತಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.

ಸುಗಮ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣಾ ನಡೆಸಲು ಹಲವಾರು ಮುನ್ನೆಚ್ಚೆರಿಕೆ ಕ್ರಮ ತೆಗೆದುಕೊಂಡಿದ್ದೇವೆ. ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಡಳಿತಕ್ಕೆ ಶಕ್ತಿಯಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದರಲ್ಲಿ ಅಂಗನವಾಡಿ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ. ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದ್ದೇವೆ. ಎಲ್ಲ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಾಬು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net