ಮತದಾನ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ

xr:d:DAFrCSyoYmU:378,j:2605756422061752170,t:24040616
ಕುರುಗೋಡಿನಲ್ಲಿ ಶನಿವಾರ ಅಂಗವಿಕಲರಿಂದ ಮತದಾನ ಜಾಗೃತಿ ಜಾಥಾಕ್ಕೆ ತಹಸೀಲ್ದಾರ್ ಎಂ.ರೇಣುಕಾ ಚಾಲನೆ ನೀಡಿದರು. ತಾಪಂ ಇಒ ನಿರ್ಮಲಾ, ನರೇಗಾ ಸಹಾಯಕ ನಿರ್ದೇಶಕ ಪಿ.ಶಿವರಾಮ ರೆಡ್ಡಿ, ಯೋಜನಾ ಅಧಿಕಾರಿ ರಾಧಿಕಾ ಇತರರಿದ್ದರು.
Published on

ಕುರುಗೋಡು: ಲೋಕಸಭಾ ಚುನಾವಣೆಯಲ್ಲಿ ಆಮಿಷಕ್ಕೆ ಒಳಗಾಗದೆ ಮತದಾರರು ಕಡ್ಡಾಯವಾಗಿ ಹಕ್ಕು ಚಲಾಯಿಸಬೇಕು. ನೂರರಷ್ಟು ಮತದಾನವಾದರೆ ಮಾತ್ರ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂದು ತಹಸೀಲ್ದಾರ್ ಎಂ.ರೇಣುಕಾ ಹೇಳಿದರು.

ಪಟ್ಟಣದಲ್ಲಿ ಶನಿವಾರ ಜಿಲ್ಲಾ ಸ್ವೀಪ್ ಸಮಿತಿ, ತಾಪಂ ಹಮ್ಮಿಕೊಂಡಿದ್ದ ಅಂಗವಿಕಲರಿಂದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲರೂ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಮತದಾನ ಪ್ರಮಾಣ ಹೆಚ್ಚಳಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು. ತಾಪಂ ಇಒ ನಿರ್ಮಲಾ ಮಾತನಾಡಿ, ಮತದಾರರು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ನಿರ್ಭಯವಾಗಿ ಹಕ್ಕು ಚಲಾಯಿಸಬೇಕು ಎಂದರು.

ದೊಡ್ಡಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅರಿವು ಮೂಡಿಸಲಾಯಿತು. ಟಿಸಿ ಮಲ್ಲಿಕಾರ್ಜುನ, ಐಇಸಿ ಚಂದ್ರಶೇಖರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net