ಮತದಾನ ಸಂವಿಧಾನಾತ್ಮಕ ಹಕ್ಕು ತಪ್ಪದೇ ಚಲಾಯಿಸಿ

WhatsApp Image 2024-04-05 at 10.35.40 AM (1)
Published on

ಲಕ್ಷ್ಮೇಶ್ವರ: ಪ್ರಜಾಪ್ರಭುತ್ವ ಯಶಸ್ಸಿಗೆ ಕಡ್ಡಾಯವಾಗಿ ಮತದಾನವನ್ನು ಮಾಡುವುದು ಅತ್ಯವಶ್ಯ. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಮತದಾನವನ್ನು ಮಾಡುವ ಹಕ್ಕು ನೀಡಿದೆ? ಎಂದು ಶಿಗ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿ ಕೊರಕನವರ ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಲಕ್ಷ್ಮೇಶ್ವರ ತಾಲೂಕು ಶಿಗ್ಲಿ ಗ್ರಾಮದಲ್ಲಿಯ ವಲಸೆ ಯಾಕ್ರೀ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನದ ಸಮುದಾಯ ಕಾಮಗಾರಿ ಸ್ಥಳದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲ ಅರ್ಹ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡುವುದರಿಂದ ಮಾತ್ರ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು. ಮೇ 7 ರಂದು ಲೋಕಸಭೆ ಚುನಾವಣೆಗೆ ಮತದಾನ ಜರುಗಲಿದ್ದು ಕುಟುಂಬದ ಎಲ್ಲ ಸದಸ್ಯರೊಂದಿಗೆ  ಭಾಗಿಯಾಗುವಂತೆ ತಿಳಿಸಿದರು. ಈ ಬೇಸಿಗೆ ಅವಧಿಯಲ್ಲಿ ಹೆಚ್ಚು ಕೆಲಸ ಒದಗಿಸಲು ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿ ಆರಂಭಿಸಲಾಗಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಗ್ರಾಪಂ ಸಿಬ್ಬಂದಿಯಾದ ಕವೊತಾ ಅಣ್ಣಿಗೇರಿ, ಎಸ್.ಡಿ. ಗೋಣೆಪ್ಪಮವರ, ಟಿಎಇ ವಿ.ಎಸ್. ಅಳವಂಡಿಮಠ, ಗ್ರಾಪಂ ಇತರ ಸಿಬ್ಬಂದಿ, ಉದ್ಯೋಗ ಖಾತ್ರಿ ಕಾಯಕ ಬಂಧುಗಳು, ಕೂಲಿ ಕಾರ್ಮಿಕರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net