

ಕುಕನೂರು: ಪ್ರತಿಯೋಬ್ಬರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಹೆಸರು ನೋಂದಾಹಿಸುವ ಮೂಲಕ ಮತದಾನ ಮಾಡಿ ಎಂದು ತಾಪಂ ಇಒ ಸಂತೋಷ ಬಿರಾದಾರ ಹೇಳಿದರು.
ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಿ
ಪಟ್ಟಣದ ಕೆಎಲ್‌ಇ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾನಂದ ಗುರುಕುಲ ಕಾಲೇಜಿನಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನ ಸ್ವೀಪ್ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು.
18 ವರ್ಷ ತುಂಬಿರುವ ವಯಸ್ಕರು ಮತದಾರರ ಪಟ್ಟಿಯಲ್ಲಿ ಸೇರಿಸಲು ವಿಶೇಷ ಮತದಾರರ ನೋಂದಣಿ ಅಭಿಯಾನ ಪ್ರಾರಂಭಗೊಂಡಿದ್ದು, ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ನೋಂದಣಿ, ತಿದ್ದುಪಡಿಗಾಗಿ ಅವಕಾಶ ಕಲ್ಪಿಸಿದ್ದು, ಇದರ ಸದುಪಯೋಗವನ್ನು ಯುವ ಮತದಾರರು ಪಡೆದುಕೊಳ್ಳಬೇಕು.
ವಿಧ್ಯಾರ್ಥಿಗಳು ಶೈಕ್ಷಣಿಕ ಪಠ್ಯ ಪುಸ್ತಕಗಳ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆಸಕ್ತಿ ವಹಿಸಬೇಕು ಎಂದರು. ತಹಸೀಲ್ದಾರ್ ಎಚ್.ಪ್ರಾಣೇಶ್, ಕಂದಾಯ ನಿರೀಕ್ಷ ರಂಗನಾಥ ಬಂಡಿ, ತಾಲೂಕ ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಇತರರಿದ್ದರು.