ಮತದಾರರ ಪಟ್ಟಿ ಸಿದ್ಧತೆ ಆರಂಭ

ckm 4
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧತೆ ಸಭೆ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು. ನಾರಾಯಣ ರಡ್ಡಿ ಕನಕ ರಡ್ಡಿ, ಕಾಂತರಾಜು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.
Published on

ಚಿಕ್ಕಮಗಳೂರು: ವಿಧಾನ ಪರಿಷತ್ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ನೂತನವಾಗಿ ಸಿದ್ಧತೆ ಆರಂಭಗೊಂಡಿದ್ದು, ಅರ್ಹ ಶಿಕ್ಷಕರನ್ನು ಮತ್ತು ಪದವೀಧರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜಕೀಯ ಪಕ್ಷಗಳ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವ ಕುರಿತ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿ, ಸೆ.30ರಂದು ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ನಮೂನೆ 18ರಲ್ಲಿ ಅರ್ಜಿ ಸ್ವೀಕರಿಸಲು ನ.6 ಕಡೇ ದಿನವಾಗಿದೆ ಎಂದು ತಿಳಿಸಿದರು.
ನ.23ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡಿ ನ.23ರಿಂದ ಡಿ.9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುವುದು. ಡಿ.30ರಂದು ಅಂತಿಮವಾಗಿ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಎಡಿಸಿ ನಾರಾಯಣ ರಡ್ಡಿ ಕನಕ ರಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾಂತರಾಜು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net