

ಯಾದಗಿರಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಹಿನ್ನೆಲೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2025ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದೆ ಎಂದು ಯಾದಗಿರಿ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ತಮ್ಮ ತಮ್ಮ ಕಾರ್ಯಾಲಯಗಳಲ್ಲಿ ಹಾಗೂ ಜಿಲ್ಲಾ ಎಲ್ಲಾ ಮತಗಟ್ಟೆ ಅಧಿಕಾರಿಗಳ ಕಛೇರಿಗಳಲ್ಲಿ ಪಟ್ಟಿಯನ್ನು 2025ರ ಜನವರಿ 6 ರಂದು ಪ್ರಕಟಿಸಿ ಹಾಗೂ ನಮೂನೆ-16ನ್ನು ದೃಢೀಕರಣದೊಂದಿಗೆ ಬೆಳಿಗ್ಗೆ 11 ಗಂಟೆಗೆ ಸಲ್ಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.