ಮತದಾರರ ಪಟ್ಟಿ ಪರಿಷ್ಕರಣೆ

ಯು.ನಾಗರಾಜ್
ಯು.ನಾಗರಾಜ್
Published on

ಗಂಗಾವತಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಅರ್ಹ ಮತದಾರರು ನಮೂನೆ 19ರ ಅರ್ಜಿಯನ್ನು ತಾಲೂಕಾಡಳಿತ ಸೌಧದ ಕಚೇರಿಯಲ್ಲಿ ಸಲ್ಲಿಸುವಂತೆ ತಹಸೀಲ್ದಾರ್ ಯು.ನಾಗರಾಜ್ ಹೇಳಿದ್ದಾರೆ. ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸುತ್ತಿರುವುದರಿಂದ ಹೊಸ ಮತ್ತು ಹಿಂದಿನ ಮತದಾರ ಪಟ್ಟಿಯಲ್ಲಿರುವ ಮತದಾರರೂ ಅರ್ಜಿ ನಮೂನೆ 19ರಲ್ಲಿ ಮಾಹಿತಿ ನೀಡಬೇಕು. ಅರ್ಜಿ ಸಲ್ಲಿಸಲು ನ.6 ಕೊನೆಯ ದಿನವಾಗಿದ್ದು, ಕರಡು ಮತದಾರರ ಪಟ್ಟಿಯನ್ನು ನ.25ರಂದು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳನ್ನು ನ.25ರಿಂದ ಡಿ.10ರವರೆಗೆ ಸಲ್ಲಿಸಲು ಅವಕಾಶವಿದೆ. ಡಿ.30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net