ಮತದಾರರ ನೋಂದಣಿ ಜಾಗೃತಿ ಅಭಿಯಾನ

voter-list-1617599190
Published on

ಶಹಾಬಾದ್: ದೇಶದಲ್ಲಿನ 18 ವರ್ಷ ತುಂಬಿದ ಪ್ರತಿ ಪ್ರಜೆಯೂ ಮತದಾನದ ಹಕ್ಕು ಪಡೆಯಬೇಕು. ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಜಗದೀಶ ಚೌರ ಹೇಳಿದರು.

ತಾಲೂಕು ಆಡಳಿತ, ಸ್ವೀಪ್ ಸಮಿತಿಯಿಂದ ಶನಿವಾರ ಹಮ್ಮಕೊಂಡಿದ್ದ ಮತದಾರರ ನೋಂದಣಿ ವಿಶೇಷ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ, ಮಾಡಬಯಸಿದ್ದಲ್ಲಿ ವೋಟರ್ ಹೆಲ್ಪ್ಲೈನ್ ಆ್ಯಪ್ ಅಥವಾ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಲ್ಲದೆ ಸಂಬAಧಿಸಿದ ಬೂತ್ ಮಟ್ಟದ ಅಧಿಕಾರಿ, ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಿ ಎಂದು ಸಲಹೆ ನೀಡಿದರು. ಗ್ರೇಡ್-2 ತಹಸೀಲ್ದಾರ್ ಗುರುರಾಜ ಸಂಗಾವಿ, ಪೌರಾಯುಕ್ತೆ ಪಂಕಜಾ, ಸಿಡಿಪಿಒ ಡಾ.ವಿಜಯಲಕ್ಷ್ಮೀ ಹೇರೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net