ನಗರ ಪ್ರದೇಶದಲ್ಲಿಯೇ ಕಡಿಮೆ ಮತದಾನ

5 ckm 7
ಚಿಕ್ಕಮಗಳೂರು ನಗರಸಭೆ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಸೆಲ್ಫಿ ವಿತ್ ಕಾರ್ಯಕ್ರಮಕ್ಕೆ ನಗರಸಭೆ ಆಯುಕ್ತ ಕೃಷ್ಣಮೂರ್ತಿ ಚಾಲನೆ ನೀಡಿದರು. ರವಿ, ತೇಜಸ್ವಿನಿ, ರಮೇಶ್ ನಾಯ್ಡು ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಗರ ಪ್ರದೇಶದಲ್ಲಿಯೇ ಪ್ರತಿ ಚುನಾವಣೆಯಲ್ಲಿಯೂ ಕಡಿಮೆ ಮತದಾನವಾಗುತ್ತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣವನ್ನು ಶೇ. ೮೦ರಷ್ಟಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ನಗರಸಭೆ ಆಯುಕ್ತ ಕೃಷ್ಣಮೂರ್ತಿ ತಿಳಿಸಿದರು.

ನಗರದ ನಗರಸಭೆ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಸೆಲ್ಫಿ ವಿತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿಯ ಪ್ರತಿ ವಾರ್ಡ್ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಕಡ್ಡಾಯವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದು ಹೇಳಿದರು.
ನಗರಸಭೆಯಿಂದ ಎಲ್ಲ ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲಾಗಿದ್ದು, ಏ.೨೬ರಂದು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.
ಕAದಾಯ ಪಾವತಿಸಲು ಸರ್ಕಾರದ ಆದೇಶದಂತೆ ಶೇಕಡ ೫ರಷ್ಟು ರಿಯಾಯಿತಿ ಇದೆ. ಈ ನಿಗಧಿತ ಅವಧಿಯಲ್ಲಿ ಸಾರ್ವಜನಿಕರು ತೆರಿಗೆ ಪಾವತಿಸಬೇಕು. ನಗರ ಸಭೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಕಂದಾಯ ವಸೂಲಾತಿಗೆ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು ತಮ್ಮ ವಾರ್ಡ್ನಲ್ಲಿ ಶಾಮಿಯಾನ ಹಾಕಿ ತಮಟೆ ಬಾರಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಚೇರಿ ವ್ಯವಸ್ಥಾಪಕ ರವಿ, ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತರೆ ತೇಜಸ್ವಿನಿ, ಕಂದಾಯ ಅಧಿಕಾರಿ ರಮೇಶ್ ನಾಯ್ಡು, ಆರೋಗ್ಯ ಶಾಖೆಯ ಸಿಬ್ಬಂದಿ, ಮೇಲ್ವಿಚಾರಕರು, ಪೌರಕಾರ್ಮಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net