ಸ್ಕೌಟ್ಸ್‌ನಿಂದ ಮತದಾನ ಜಾಗೃತಿ

21 ಎಸ್ಕೆಪಿ 1
ಶಿಕಾರಿಪುರ ಪಟ್ಟಣದಲ್ಲಿ ತಾಪಂ, ಪುರಸಭೆಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.
Published on

ಶಿಕಾರಿಪುರ: ಲೋಕಸಭಾ ಚುನಾವಣೆ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್, ಪುರಸಭೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಮೇ 7ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸಮರ್ಥ ಅಭ್ಯರ್ಥಿ ಆಯ್ಕೆಗೊಳಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಂತೆ ಕರೆ ನೀಡಲಾಯಿತು. ನಮ್ಮ ಮತ, ನಮ್ಮ ಹಕ್ಕು, ನಮ್ಮ ನಡೆ-ಮತಗಟ್ಟೆ ಕಡೆ ಘೋಷವಾಕ್ಯದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು.
ಇದೇ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಸದಸ್ಯರು, ತಾಪಂ ಮತ್ತು ಪುರಸಭೆ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net