ಆಲೂರಿನಲ್ಲಿ ಮತದಾನ ಅರಿವು

IMG-20240403-WA0185
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಂಭಾಗ ಮತದಾರರಲ್ಲಿ ಅರಿವು ಮೂಡಿಸುವ ಜಾಥಾ ನಡೆಸಲಾಯಿತು. ಸ್ಟೀಫನ್ ಪ್ರಕಾಶ್, ಎ.ಡಿ ಕೇಶವಮೂರ್ತಿ ಇತರರರು ಇದ್ದರು.
Published on

ಆಲೂರು: ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಹಯೋಗದಲ್ಲಿ ಸ್ವೀಪ್ ವತಿಯಿಂದ ಬುಧವಾರ ಪಟ್ಟಣದಲ್ಲಿ ವಿಭಿನ್ನ ಕಾರ್ಯಕ್ರಮ ಏರ್ಪಡಿಸಿ ಜನರಲ್ಲಿ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ನಂತರ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಂಭಾಗ ತಪ್ಪದೆ ಮಾತದಾನ ಮಾಡಬೇಕು ಎಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಸ್ ನಿಲ್ದಾಣದ ಮುಂಭಾಗದಲ್ಲಿ ಬೀದಿ ನಾಟಕದ ಪ್ರದರ್ಶನ ಮಾಡುವ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಸ್ಟೀಫನ್ ಪ್ರಕಾಶ್, ತಾಲೂಕು ಪಂಚಾಯಿತಿ ಪ್ರಭಾರ ಇಒ ಗಿರೀಶ್, ಎ.ಡಿ ಕೇಶವಮೂರ್ತಿ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net