

ಬೆಳಗಾವಿ : ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಸಾಗರ ಬಿ.ಇಡಿ ಮಹಾವಿದ್ಯಾಲಯದ ಸಹಯೋಗದಲ್ಲಿ ಶನಿವಾರ ನಗರದಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.
ಜಿಲ್ಲಾ ಸ್ವೀಪ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಹರ್ಷಲ್ ಭೂಯರ್ ಅವರು ಬೋಗಾರವೇಸ ವೃತ್ತದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು. ಜಾಥಾವು ಬೋಗಾರವೇಸ, ಮಾರುತಿ ಗಲ್ಲಿ, ಗಣಪತಿ ಗಲ್ಲಿ ಹಾಗೂ ಶನಿವಾರ ಕೂಟ ಮೂಖಾಂತರ ರಾಣಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಮುಕ್ತಾಯವಾಯಿತು.
ನನ್ನ ಮತ ಮಾರಾಟಕಿಲ್ಲ, ಮತದಾನದಿಂದ ವಂಚಿತರಾಗಬೇಡಿ, ನಮ್ಮ ಮತ ನಮ್ಮ ಹಕ್ಕು, ಆಮಿಷಕ್ಕೆ ಮರುಳಾಗದಿರಿ ಯೋಚಿಸಿ ಮತ ಚಲಾಯಿಸಿ, ಆಮಿಷಗಳನ್ನು ನಿರಾಕರಿಸಿ ನಿಮ್ಮಷ್ಟದಂತೆ ಚಲಾಯಿಸಿ, ಪ್ರತಿ ಮತವು ಅಮೂಲ್ಯ ತಪ್ಪದೇ ಮತ ಚಲಾಯಿಸಿ ಎಂದು ವಿವಿಧ ಮತಜಾಗೃತಿ ಘೋಷಣೆಗಳನ್ನು ಕೂಗುವುದರ ಮೂಲಕ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಕಾಲೇಜಿನ ಪ್ರಾಚಾರ್ಯ ಆರ್.ವಿ.ಹಳಬ, ಡಾ.ಟಿ.ಎಂ.ನೌಕುಡಕರ, ವಿನಾಯಕ ಮೋರೆ, ಎನ್.ಐ.ಸನದಿ, ಡಿ.ಎಂ. ಚವ್ಹಾಣ, ಎಂ.ಬಿ.ನರಸನ್ನವರ, ಎಂ.ಎಸ್.ಹಿರೇಮಠ, ಜಿಲ್ಲಾ ಎಸ್.ಬಿ.ಎಂ ಸಮಾಲೋಚಕ ಬಾಹುಬಲಿ ಮೆಳವಂಕಿ, ತಾಲೂಕು ಐಇಸಿ ಸಂಯೋಜಕ ರಮೇಶ ಮಾದರ ಸೇರಿದಂತೆ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.