ಪ್ರತಿಯೊಬ್ಬರಲ್ಲೂ ಮತದಾನದ ಅರಿವು ಅಗತ್ಯ

11_Hnp_Prajaprabhutva Day_2 A
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;
Published on

ಹೊಳೆನರಸೀಪುರ: 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಮತದಾನದ ಹಕ್ಕನ್ನು ಸಂವಿಧಾನ ನೀಡಿದೆ ಎಂದು ತಹಸೀಲ್ದಾರ್ ವೈ.ಎಂ.ರೇಣು ಕುಮಾರ್ ಹೇಳಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಮತದಾನದ ಪ್ರಕ್ರಿಯೆಯನ್ನು ತಿಳಿದುಕೊಳ್ಳಬೇಕು. ಯುವ ಜನತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಳ್ಳಬೇಕು. ಜತೆಗೆ ಮತದಾನದ ಬಗ್ಗೆ ಅರಿವು ಇರಬೇಕು ಎಂದರು.

ಪ್ರಜಾಪ್ರಭುತ್ವ ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 25,000 ರೂ., ದ್ವಿತೀಯ ಬಹುಮಾನ 15,000 ರೂ. ಹಾಗೂ ತೃತೀಯ ಬಹುಮಾನ ಹತ್ತು ಸಾವಿರ ರೂ. ಒಳಗೊಂಡಿರುತ್ತದೆ. ಸರ್ಕಾರಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಜೇತರಾಗಬೇಕು ಎಂದರು.

ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಿ.ಮುನಿರಾಜು ಮಾತನಾಡಿ, ಸಂವಿಧಾನ ನಮಗೆ ಉತ್ತಮ ಅವಕಾಶ ನೀಡಿದೆ. ಸಂವಿಧಾನದ ನೆರಳಿನಲ್ಲಿ ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವೆ. ಸಂವಿಧಾನದ ವಿಷಯಗಳನ್ನು ನಾವೆಲ್ಲ ತಿಳಿದುಕೊಳ್ಳುವ ಮೂಲಕ ಉತ್ತಮ ಪ್ರಜೆಯಾಗಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಕೃಷ್ಣಕುಮಾರ್, ಮೂರ್ತಿ, ಭಾಗ್ಯಾ ಲಕ್ಷ್ಮೀ, ಉದಯಕುಮಾರ್, ಮಾದಯ್ಯ ಸ್ವಾಮಿ, ಪೂರ್ಣಿಮಾ, ಉಮೇಶ್, ಅಶೋಕ್,ಕಾರ್ಮಿಕ ಇಲಾಖೆಯ ಅಧಿಕಾರಿ ಯಮುನಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net