ಮೈಸೂರಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

WhatsApp Image 2024-03-21 at 6.30.21 PM
Published on

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೋಗಾದಿ ಪಟ್ಟಣ ಪಂಚಾಯಿತಿ ವತಿಯಿಂದ ಗುರುವಾರ ಜಟ್ಟಿಹುಂಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ‘ಚುನಾವಣೆ ಪರ್ವ ದೇಶದ ಗರ್ವ’ ಶೀರ್ಷಿಕೆಯಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಜಾಥಾ ನಡೆಯಿತು.

ಜಾಗೃತಿ ಜಾಥಾಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ ಚಾಲನೆ ನೀಡಿ ನಂತರ ಮನೆ ಮನೆಗೆ ತೆರಳಿ ಮತದಾನವನ್ನು ಕಡ್ಡಾಯವಾಗಿ ಮಾಡುವಂತೆ ಕರಪತ್ರಗಳನ್ನು ನೀಡಿದರು. ಅಲ್ಲದೆ, ಮಾನವ ಸರಪಳಿ ನಿರ್ಮಿಸಿ ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಆರ್. ಸುರೇಶ್, ಜಿಲ್ಲಾ ನಿರೂಪಣಾಧಿಕಾರಿ ಡಿ. ಮಂಜುನಾಥ, ಮೈಸೂರು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಬ್ಬಯ್ಯ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net