ಪೂರ್ಣಕುಂಭ ಹೊತ್ತು ಮತದಾನ ಜಾಗೃತಿ

Voting, awareness, Purnakumbha,
Published on

ಹರಿಹರ: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಭಾಗವಹಿಸುವ ನಿಟ್ಟಿನಲ್ಲಿ ತಾಲೂಕಾಡಳಿತ ವತಿಯಿಂದ ನಗರದಲ್ಲಿ ನಡೆದ ನಮ್ಮ ನಡೆ ಮತಗಟ್ಟೆ ಕಡೆ ಜಾಗೃತಿ ಜಾಥಾದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು.

ತಾಲೂಕು ಕಚೇರಿ ಮುಂಭಾಗದಲ್ಲಿ ಚುನಾವಣಾಧಿಕಾರಿ ಉದಯ ಕುಂಬಾರ್ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಬಿಇಒ ಕಚೇರಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿ ಯುವ ಹಾಗೂ ಹಿರಿಯ ಮತದಾರರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಪೂರ್ಣಕುಂಭ ಹಾಗೂ ವಾದ್ಯಗಳೊಂದಿಗೆ ಮತದಾನ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಾಂ, ಪೌರಾಯುಕ್ತ ಐ.ಬಸವರಾಜ್, ಬಿಇಒ ಹನುಮಂತಪ್ಪ, ತಾಪಂ, ನಗರಸಭೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net