ಮೆಹಂದಿ-ರಂಗೋಲಿಯಿಂದ ಮತ ಜಾಗೃತಿ

16 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್​ ಸಮಿತಿ ದಿನಕ್ಕೊಂದು ಹೊಸ ಹೊಸ ಚಟುವಟಿಕೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಅದರ ಭಾಗವಾಗಿ ಮಂಗಳವಾರ ಮೆಹಂದಿ ಹಾಗೂ ರಂಗೋಲಿ ಸ್ಪರ್ಧೆ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು.
ನಗರದ ಬಸ್​ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಲ್ಲಿ ಹಾಗೂ ಹೊಸದಾಗಿ ಮತದಾನಕ್ಕೆ ಅರ್ಹತೆ ಪಡೆದ ಯುವ ಜನರನ್ನು ಮತದಾನಕ್ಕೆ ಪ್ರೋತ್ಸಾಹಿಸುವ ಉದ್ದೇಶದಿಂದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಬಸ್​ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಮೆಹಂದಿ ಕಾರ್ಯಾಗಾರ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಹೊಸ ಬಸ್​ ನಿಲ್ದಾಣದಲ್ಲಿ ಏರ್ಪಡಿಸಲಾಗಿತ್ತು.
ಜಿಲ್ಲಾ ಸ್ವೀಪ್​ ಸಮಿತಿ ಅಧ್ಯೆ ಸ್ವರೂಪ ಟಿ.ಕೆ. ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ., ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net