ಲಿಖಿತ ಭರವಸೆ ಕೊಟ್ಟರಷ್ಟೇ ಬೆಂಬಲ: ಸಮಸ್ಯೆ ಬಗೆಹರಿಯದಿದ್ದರೆ ಮತದಾನ ಬಹಿಷ್ಕಾರ

16-12-rama-kurubarahally
Published on

ರಾಮನಗರ: ಬೀದಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ವಿಫಲವಾಗಿದ್ದಾರೆ ಎಂದು ಆಕ್ರೋಶಗೊಂಡ ತಾಲೂಕಿನ ಪೇಟೆ ಕುರುಬರಹಳ್ಳಿಯ ಜೋಗಯ್ಯರ ಬೀದಿ ನಿವಾಸಿಗಳು ಮತದಾನ ಬಹಿಷ್ಕರಿಸುವ ಬೆದರಿಕೆ ಹಾಕಿದ್ದಾರೆ. ಪ್ರಚಾರಕ್ಕೆ ಬರುವ ಅಭ್ಯರ್ಥಿಗಳನ್ನು ಮನೆ ಬಾಗಿಲಿಗೆ ಸೇರಿಸದ ನಿವಾಸಿಗಳು ಬೀದಿಯ ಆರಂಭದಲ್ಲಿಯೇ ಬ್ಯಾನರ್ ಹಾಕಿ ವಾಪಸ್ ಕಳಿಸುತ್ತಿದ್ದಾರೆ.

ಬೀದಿಯಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ. ಸಮರ್ಪಕ ಚರಂಡಿ, ರಸ್ತೆ ಇಲ್ಲ, ಮಳೆಗಾಲದಲ್ಲಿ ಕೊಳಚೆ ನೀರು ಮನೆಗೆ ನುಗ್ಗುತ್ತದೆ. ಇದರಿಂದಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ನಿವಾಸಿಗಳು ದೂರಿದರು. ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಲಿಖಿತ ಭರವಸೆ ನೀಡುವ ಅಭ್ಯರ್ಥಿಯನ್ನು ಮಾತ್ರ ಬೆಂಬಲಿಸುತ್ತೇವೆ. ಇಲ್ಲವಾದರೆ ಮತದಾನ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net