ಅಕ್ರವಳ್ಳಿ ಬಡಾವಣೆಯಲ್ಲಿ ಮತದಾನ ಬಹಿಷ್ಕಾರ

sri- pro
ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಪಂ ಅಕ್ರವಳ್ಳಿ ಬಡಾವಣೆ ನಿವಾಸಿಗಳು ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ಬ್ಯಾನರ್ ಅಳವಡಿಸಿ ಆಕ್ರೋಶ ವ್ಯಕ್ತ ಪಡಿಸಿದರು. ನಾಗೇಂದ್ರ, ನಿರ್ಮಲಾ, ಸುರೇಶ್ ಬಾಬು, ಕೇಶವ್, ಭಾಗ್ಯಾ, ಆಶೀಶ್ ಇತರರಿದ್ದರು.
Published on

ಶೃಂಗೇರಿ: ವಿದ್ಯಾರಣ್ಯಪುರ ಗ್ರಾಪಂ ಅಕ್ರವಳ್ಳಿ ಬಡಾವಣೆ ನಿವಾಸಿಗಳು ರಸ್ತೆ ದುರಸ್ತಿಗೆ ಆಗ್ರಹಿಸಿ ಮುಂಬರುವ ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಅಕ್ರವಳ್ಳಿ ಬಡಾವಣೆ ರಾಷ್ಟ್ರೀಯ ಹೆದ್ದಾರಿ 169ರ ಸಮೀಪದಲ್ಲಿಯೇ ಇದ್ದು, 256ಕ್ಕೂ ಹೆಚ್ಚು ನಿವಾಸಿಗಳು ವಾಸವಾಗಿದ್ದಾರೆ. ಅಲ್ಲಿರುವ 900ಕ್ಕೂ ಹೆಚ್ಚು ಮತದಾರರು ಮತದಾನ ಬಹಿಷ್ಕರಿಸಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಓಡಾಡಲು ತೊಂದರೆಯಾಗುತ್ತಿದೆ. ಗ್ರಾಪಂಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಏನೂ ಪ್ರಯೋಜನವಾಗಿಲ್ಲ. ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ಚುನಾವಣೆ ಘೋಷಣೆಗೂ ಮುನ್ನವೇ ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಾಪಂ ಇಒ ಸುದೀಪ್, ಪಿಡಿಒ ಗೋಪಾಲ್ ಹಾಂಡ, ಗ್ರಾಪಂ ಅಧ್ಯಕ್ಷ ಪ್ರವೀಣ್ ಪೂಜಾರಿ ಹಾಗೂ ಸದಸ್ಯರು ಬುಧವಾರ ಸಂಜೆ ಸ್ಥಳಕ್ಕೆ ಆಗಮಿಸಿ ಶೀಘ್ರ ಗುಂಡಿ ಮುಚ್ಚಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೆ ಒಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕಾರ ಮುಂದುವರಿಸುತ್ತೇವೆ ಎಂದರು. ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net