ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಗಳಿಗೆ ಮತದಾನ

IMG_20241028_130725
ರಾಜ್ಯ ಸರ್ಕಾರಿ ನೌಕರರ ಸಂಘದ ಅರಸೀಕೆರೆ ತಾಲೂಕು ಘಟಕದ ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಪ್ರೌಢಶಾಲೆ ವಿಭಾಗದ ಮತದಾರರು ತಮ್ಮ ಹಕ್ಕು ಚಲಾಯಿಸಿ ಸಂಭ್ರಮಿಸಿದರು.
Published on

ಅರಸೀಕೆರೆ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ 16 ನಿರ್ದೇಶಕರ ಸ್ಥಾನಕ್ಕೆ ನಗರದ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಸೋಮವಾರ ಮತದಾನ ನಡೆಯಿತು.

ಬೆಳಗ್ಗೆಯಿಂದಲೇ ಮತಗಟ್ಟೆಗೆ ಆಗಮಿಸಿದ ವಿವಿಧ ಇಲಾಖೆ ನೌಕರ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ಮತಗಟ್ಟೆ ಹೊರಗೆ ಯಾವುದೇ ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೂ ತಾವೇನು ಕಡಿಮೆ ಇಲ್ಲದಂತೆ ಅಭ್ಯರ್ಥಿಗಳು ಮತಯಾಚನೆ ಮಾಡುತ್ತಿದ್ದರು.

ಯಡವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಮಂಜುನಾಥ್ ಅವರ ಮತವನ್ನು ಬೇರೊಬ್ಬರು ಹಾಕಿದ್ದಾರೆ ಎನ್ನುವ ಚರ್ಚೆ ಜೋರಾಗಿ ನಡೆದಿತ್ತು. ಹಾಟ್‌ಬಾಕ್ಸ್, ಸೀರೆ ಸೇರಿದಂತೆ ಹಲವು ಕೊಡುಗೆ ನೀಡಿರುವುದು ಚುನಾವಣಾ ಅಖಾಡವನ್ನು ಮತ್ತಷ್ಟು ರಂಗೇರುವಂತೆ ಮಾಡಿದೆ. 34 ನಿರ್ದೇಶಕ ಸ್ಥಾನಗಳ ಪೈಕಿ ಈಗಾಗಲೇ 18 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫಲಿತಾಂಶ ತಡರಾತ್ರಿ ವೇಳೆಗೆ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net