85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ

23 yelandur 01
Published on

ಯಳಂದೂರು: 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರು ಮತದಾನದಿಂದ ವಂಚಿತರಾಗದಂತೆ ಚುನಾವಣೆ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್‌ಕುಮಾರ್ ಮಾಹಿತಿ ನೀಡಿದರು.


ಪಟ್ಟಣ ಪಂಚಾಯಿತಿ ವತಿಯಿಂದ 85 ವರ್ಷದ ಮತದಾರರ ಮನೆ ಮನೆಗೆ ಭೇಟಿ ಮತದಾನ ಜಾಗೃತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದ್ದ ಕೇಂದ್ರ ಚುನಾವಣಾ ಆಯೋಗ, ಈ ಬಾರಿ ವಯೋಮಿತಿಯಲ್ಲಿ 5 ವರ್ಷ ಹೆಚ್ಚಳ ಮಾಡಿದೆ. 85 ವರ್ಷ ಮೇಲ್ಪಟ್ಟವರಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದೆ ಎಂದ ಅವರು, ಪಟ್ಟಣದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮನೆಗಳಿಗೆ ತೆರಳಿ ಮತ ಚಲಾಯಿಸುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.


ಪಟ್ಟಣದ ಪಂಚಾಯಿತಿ ಸಿಬ್ಬಂದಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net