

ರಾಯಚೂರು: ಮತದಾನ ಪ್ರಜಾಭುತ್ವ ವ್ಯವಸ್ಥೇಯಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ನೀಡಿರುವ ವಿಶೇಷ ಹಕ್ಕಾಗಿದ್ದು, ಅದಕ್ಕೆ ಬೆಲೆ ಕಟ್ಟಲಾಗದ ವೌಲ್ಯವಿದೆ. ಕಾರಣ ಆಮೀಷಗಳಿಗೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾೀಶ ಮಾರುತಿ ಬಾಗಡೆ ಹೇಳಿದರು.
ಸ್ಥಳೀಯ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮತದಾನ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದ್ದು, ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.
ದೇಶದ ಭವಿಷ್ಯ ಯುವಕರ ಕೈಯಲ್ಲಿದ್ದು, ಯುವ ಮತದಾರರು ಮತದಾನ ಮಾಡು ಮುಂದೆ ಬಂದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ. ಪ್ರತಿಯೊಬ್ಬರು ಮತದಾನದ ಹಕ್ಕು ಚಲಾಯಿಸಿದಾಗ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಾಧ್ಯವಾಗಲಿದೆ ಎಂದು ಹೇಳಿದರು.
ಜಿಲ್ಲಾಕಾರಿ ಚಂದ್ರಶೇಖರ ನಾಯಕ ಮಾತನಾಡಿ, ಕಳೆದ ಬಾರಿ ಸ್ವೀಪ್ ಸಮಿತಿಯಿಂದ ಮತದಾರರ ಪ್ರಮಾಣ ಹೆಚ್ಚಿಸುವಲ್ಲಿ ಉತ್ತಮ ಕಾರ್ಯವಾಗಿದೆ. ರಾಜ್ಯದಲ್ಲಿ ಶೇ.4ರಷ್ಟು ಮತದಾನದ ಪ್ರಮಾಣವೂ ಹೆಚ್ಚಳವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚುನಾವಣೆ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಬಿಎಲ್‌ಒಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನ್ಯಾಯಾೀಶ ದಯಾನಂದ ಬೇಲೂರೆ, ಜಿ.ಪಂ. ಸಿಇಒ ರಾಹುಲ್ ತುಕಾರಾಮ ಪಾಂಡ್ವೆ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಸಹಾಯಕ ಆಯುಕ್ತೆ ಮಹೆಬೂಬಿ, ತಹಸೀಲ್ದಾರ್ ಸುರೇಶ ವರ್ಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ, ಆರ್‌ಡಿಎ ಆಯುಕ್ತ ಮಹೆಬೂಬ್ ಜಿಲಾನಿ, ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ಉಪಸ್ಥಿತರಿದ್ದರು.