ಪ್ರಜಾತಂತ್ರ ವ್ಯವಸ್ಥೆಗೆ ಮತದಾನ ಮಹತ್ವದ್ದು

ಪಾಂಡವಪುರ ತಾಲೂಕಿನ ಪಟ್ಟಣಗೆರೆಯಲ್ಲಿ ಸ್ವೀಪ್ ಕಾರ್ಯಕ್ರಮದಡಿ ನರೇಗಾ ಕೂಲಿ ಕಾರ್ಮಿಕರಿಗೆ ಮತದಾನದ ಬಗ್ಗೆ ತಾಪಂ ಇಒ ಲೋಕೇಶ್ ಮೂರ್ತಿ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಾಯಕ ನಿರ್ದೇಶಕ ಸುರೇಂದ್ರ, ಪಿಡಿಒ ಮಹೇಶ್ ಮತ್ತಿತರರಿದ್ದರು.
ಪಾಂಡವಪುರ ತಾಲೂಕಿನ ಪಟ್ಟಣಗೆರೆಯಲ್ಲಿ ಸ್ವೀಪ್ ಕಾರ್ಯಕ್ರಮದಡಿ ನರೇಗಾ ಕೂಲಿ ಕಾರ್ಮಿಕರಿಗೆ ಮತದಾನದ ಬಗ್ಗೆ ತಾಪಂ ಇಒ ಲೋಕೇಶ್ ಮೂರ್ತಿ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಾಯಕ ನಿರ್ದೇಶಕ ಸುರೇಂದ್ರ, ಪಿಡಿಒ ಮಹೇಶ್ ಮತ್ತಿತರರಿದ್ದರು.
Published on

ಪಾಂಡವಪುರ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮತದಾನ ಅತ್ಯಂತ ಪ್ರಮುಖವಾಗಿದ್ದು, ಪ್ರತಿಯೊಬ್ಬರು ಮತ ಚಲಾಯಿಸುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ತಾಪಂ ಇಒ ಲೋಕೇಶ್ ಮೂರ್ತಿ ಹೇಳಿದರು.

ತಾಲೂಕಿನ ಟಿ.ಎಸ್.ಛತ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ಟಣಗೆರೆಯಲ್ಲಿ ಬುಧವಾರ ಸ್ವೀಪ್ ಚಟುವಟಿಕೆ ಕಾರ್ಯಕ್ರಮದಡಿಯಲ್ಲಿ ನರೇಗಾ ಯೋಜನೆ ಕೂಲಿ ಕಾರ್ಮಿಕರಿಗೆ ಮತದಾನದನ ಜಾಗೃತಿ ಮೂಡಿಸಿ ಮಾತನಾಡಿದರು.

ಕಾರ್ಮಿಕರು ಏ.26 ರಂದು ರಾಜ್ಯದಲ್ಲಿ ನಡೆಯುವ ಮೊದಲ ಹಂತದ ಮತದಾನದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಅಂದು ಎಲ್ಲಾ ಕೆಲಸ ಕಾರ್ಯಕಗಳನ್ನು ಬದಿಗಿಟ್ಟು ಮತದಾನ ಮಾಡಬೇಕು. ರಾಜಕಾರಣಿಗಳು ತೋರುವ ಯಾವುದೇ ಅಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ತಿಳಿಸಿದರು.

ನನ್ನ ಮತ, ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಯುವ ಸಮುದಾಯ ಮತದಾನ ಮಾಡುವ ಮೂಲಕ ಸೂಕ್ತ ಅಭ್ಯರ್ಥಿಯನ್ನು ಆರಿಸಿಕೊಂಡು ದೇಶದ ಅಭಿವೃದ್ಧಿಗೆ ಸಹಕರಿಸಬೇಕು. ಗ್ರಾಮೀಣ ಪ್ರದೇಶದ ಜನರು, ನಗರ ಪ್ರದೇಶದ ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ಇದು ಉತ್ತಮ ಬೆಳವಣಿಗೆಯಾಗಿದ್ದು, ಇದರಿಂದ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದಾಗಿದೆ. ಮತದಾನದಿಂದ ಯಾರು ವಂಚಿತರಾಗಬಾರದು ಎಂದು ಸಲಹೆ ನೀಡಿದರು.ಇದೇ ವೇಳೆ ಮತದಾನ ಕುರಿತಂತೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರದಮಲ್ಲಿ ಪಂಚಾಯತ್

ರಾಜ್ ಸಹಾಯಕ ನಿರ್ದೇಶಕ ಸುರೇಂದ್ರ, ಪಿಡಿಒ ಮಹೇಶ್, ಐಇಸಿ ಸಂಯೋಜಕಿ ಕುಸುಮಾ, ಹರೀಶ್, ಪ್ರತಾಪ್ ನರೇಗಾ ಸಿಬ್ಬಂದಿ ನರಸಿಂಹ, ವಿಕಾಶ್, ನಾರಾಯಣ್, ಮಂಜುನಾಥ್, ಸುರೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net