ಮತದಾನ ಹಾಗೂ ಚುನಾವಣೆ ಒಂದೇ ನಾಣ್ಯದ ಎರಡು ಮುಖ: ರಾಹುಲ ಶಿಂಧೆ

Published on

ಬೆಳಗಾವಿ: ಪ್ರಜಾಪ್ರಭುತ್ವದಲ್ಲಿ ಮತದಾನ ಹಾಗೂ ಚುನಾವಣೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ತಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ. ಸಿ.ಇ.ಓ ರಾಹುಲ ಶಿಂಧೆ ಹೇಳಿದರು.

ಚಿಕ್ಕೋಡಿ ತಾ.ಪಂ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮತದಾನ ಜಾಗೃತಿಯ ಎತ್ತಿನ ಬಂಡಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಮೇ7 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುತ್ತಿದೆ. ಮತದಾನದ ದಿನದಂದು ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಸಬೇಕು ಎಂದರು. ಮತದಾನ ಎಂಬುವದು ಸಂವಿಧಾನ ನೀಡಿದ ವರದಾನವಾಗಿದ್ದು ಇಂತಹ ಅತ್ಯಮೂಲ್ಯವಾದ ಹಕ್ಕನ್ನು ತಪ್ಪದೇ ಚಲಾಯಿಸುವುದು ಪ್ರತಿಯೊಬ್ಬ ಅರ್ಹ ಮತದಾರರ ಜವಾಬ್ದಾರಿ. ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಸ್ವಯಂ ಪ್ರೇರಣೆಯಿಂದ ಅರ್ಹ ಮತದಾರರು ಮತ ಚಲಾಯಿಸುವದರ ಜತೆಗೆ  ತಮ್ಮ ನೆರೆಹೊರೆಯವರು ಸಹ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಮುಂದಾಗುವಂತೆ ಕರೆ ನೀಡಿದರು. 

ಜಾಥಾ ಕಾರ್ಯಕ್ರಮವು ತಾಪಂ ಕಚೆರಿಯಿಂದ ಪ್ರಾರಂಭವಾಗಿ ಬಸವೇಶ್ವರ ಸರ್ಕಲ್ ನಿಂದ ಬಸ್ ನಿಲ್ದಾಣ ಸರ್ಕಲ ಸುತ್ತಾಡಿ ತಾಪಂ ಮುಂದೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. ಚಿಕ್ಕೋಡಿ ತಾಲೂಕಿನ ಸುತ್ತಮುತ್ತಲಿನ ರೈತರು ಚಕ್ಕಡಿ ಬಂಡೆಯೊಂದಿಗೆ ಭಾಗಿಯಾಗಿದ್ದರು.

ಚಿಕ್ಕೋಡಿ ಉಪವಿಭಾಗಾಧಿಕಾರಿ ಮೆಹಬೂಬಿ, ಜಿ.ಪಂ ಯೋಜನಾ ನಿರ್ದೆಶಕ ಡಾ: ಎಂ. ಕೃಷ್ಣರಾಜು,  ಚಿಕ್ಕೋಡಿ ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಜಿಪಂ ಲೆಕ್ಕಾಧಿಕಾರಿ ಗಂಗಾ ಹಿರೇಮಠ, ಚಿಕ್ಕೋಡಿ ತಾಪಂ ಇ.ಓ. ಜಗದೀಶ ಪೂಜಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net