ಮತದಾನ ಅತಿ ಅಮೂಲ್ಯ

mudradi
Published on

ಹೆಬ್ರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತಿ ಅಮೂಲ್ಯ. ಬಾಲ್ಯದಲ್ಲಿಯೇ ಮತದಾನದ ಪ್ರಾಮುಖ್ಯತೆ ತಿಳಿದುಕೊಳ್ಳಬೇಕು ಎಂದು ಮುದ್ರಾಡಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಇಂದಿರಾ ಬಾಯರಿ ಹೇಳಿದರು.

ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನೇತಾಜಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಶನಿವಾರ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿದರು.

ಮಕ್ಕಳಿಗೆ ಆಯೋಜನೆ ಮಾಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರತೀಕ್ಷಾ ಪಿ., ವಿನೀತಾ, ಭಿತ್ತಿಚಿತ್ರ ಸ್ಪರ್ಧೆಯಲ್ಲಿ ರಶ್ಮಿ, ಪ್ರಬಂಧದಲ್ಲಿ ಸುಗಂಧಿ ಪ್ರಥಮ ಸ್ಥಾನ ಪಡೆದರು. ಎಲ್ಲರಿಗೂ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು.

ಮತದಾರರ ಸಾಕ್ಷರತಾ ಕ್ಲಬ್ ಅಧ್ಯಕ್ಷ ಅರ್ಪಿತ್, ಕಾರ್ಯದರ್ಶಿ ಸ್ನೇಹಾ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮತದಾರರ ಸಾಕ್ಷರತಾ ಕ್ಲಬ್ ನೋಡಲ್ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿದರು. ಮಹೇಶ್ ನಾಯ್ಕ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net