ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಕ್ರೀಡಾಕೂಟ

PTR_24 OCT_5
Published on

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ವಿವೇಕಾನಂದ ಪದವಿ ಕಾಲೇಜಿನ ಸಂಚಾಲಕ ಮುರಳೀಕೃಷ್ಣ ಕ್ರೀಡಾಜ್ಯೋತಿಯನ್ನು ಬೆಳಗಿಸಿ, ಧ್ವಜಾರೋಹಣ ನಡೆಸಿ ಉದ್ಘಾಟಿಸಿದರು.

ವಿವೇಕಾನಂದ ಮಹಾವಿದ್ಯಾಲಯ ದೈಹಿಕ ಶಿಕ್ಷಕ ರವಿಶಂಕರ್, ವಿವೇಕಾನಂದ ಕಾನೂನು ಮಹಾವಿದ್ಯಾಲಯ ದೈಹಿಕ ಶಿಕ್ಷಕ ನವೀನ್, ವಿವೇಕಾನಂದ ಪಾಲಿಟೆಕ್ನಿಕ್ ಕ್ರೀಡಾ ಸಹಾಯ ನಿರ್ದೇಶಕ ಅನಿಲ್ ವಾರ್ಷಿಕ ಕ್ರೀಡಾಕೂಟವನ್ನು ಯಶಸ್ಸಿಗೆ ಸಹಕರಿಸಿದರು.

ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕ ಮಹಾದೇವ ಶಾಸ್ತ್ರಿ, ಸದಸ್ಯ ರವಿ ಮುಂಗ್ಲಿಮನೆ, ಕಾಲೇಜಿನ ವಿದ್ಯಾರ್ಥಿ ನಾಯಕ ಅಂಶಿಕ್ ಉಪಸ್ಥಿತರಿದ್ದರು.

ಸೃಜನ್ಯ ತಂಡದವರು ಪ್ರಾರ್ಥಿಸಿದರು. ಪ್ರಾಂಶುಪಾಲ ಮುರಳೀಧರ್ ಎಸ್. ಸ್ವಾಗತಿಸಿ, ಪ್ರಾಸ್ತಾವನೆಗೈದರು. ಉಪಕ್ರೀಡಾ ಕಾರ್‍ಯದರ್ಶಿ ಶ್ರೀಕಾಂತ್ ಪ್ರತಿಜ್ಞಾವಿಽ ಬೋಽಸಿದರು. ವಿದ್ಯಾರ್ಥಿ ನಾಯಕಿ ಶ್ರಾವ್ಯ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net