ಪ್ರಧಾನಿ ಮೋದಿ ಬೆನ್ನತ್ತಿದ್ದಾರೆ ಬೇಗ ಕಾಮಗಾರಿ‌ ಪೂರ್ಣಗೊಳಿಸಿ: ಸಚಿವ ಸೋಮಣ್ಣ ಅಳಲು

IMG-20241114-WA0012.jpg
Published on

ಬೆಳಗಾವಿ: ದೇಶ, ರಾಜ್ಯದಲ್ಲಿ ಕೈಗೊಂಡಿರುವ ರೈಲ್ವೆ ಇಲಾಖೆಯ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸುವಂತೆ ಪ್ರಧಾನಿ‌‌ ನರೇಂದ್ರ ಮೋದಿ ಬೆನ್ನು ಬಿದ್ದಿದ್ದಾರೆ. ಅವರಿಗೆ ಉತ್ತರ ಕೊಡುವುದು ಕಷ್ಟವಾಗಿದೆ ಎಂದು ಅಧಿಕಾರಿಗಳ ಮುಂದೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಳಲು ತೋಡಿಕೊಂಡರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರೈಲ್ವೆ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸದ್ಯ ಕರ್ನಾಟಕದಲ್ಲಿ ಅಂದಾಜು 39 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಕಾಮಗಾರಿಗಳು ಪ್ರಗತಿ ಹಂತದಲ್ಲಿದ್ದು, 2027ಕ್ಕೆ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸಲು ಪ್ರಧಾನಿ ಮೋದಿ ಅಚರು ಗಡುವು ನೀಡಿದ್ದಾರೆ. ಅಲ್ಲದೆ, ರೈಲ್ವೆ ಯೋಜನೆಗಳ ಅನುಷ್ಠಾನ, ಕಾಮಗಾರಿಗಳ ಪ್ರಗತಿ ಸೇರಿ ಸಮಗ್ರ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿದಿನ ಸಲ್ಲಿಸಬೇಕು. ನಿಗದಿ ಸಮಯದಲ್ಲಿಯೇ ಎಲ್ಲ ಕಾಮಗಾರಿಗಳು ಮುಗಿಸುವಂತೆ ಒತ್ತಡವಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ಒಗ್ಗಟ್ಟಿನಿಂದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಸಹಕಾರ ನೀಡುವಂತೆ ಸಚಿವ ವಿ.ಸೋಮಣ್ಣ ತಿಳಿಸದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net