

ಕುಶಾಲನಗರ:
ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಬಿ. ಜಗದೀಶ್ ಅವಿರೋಧವಾಗಿ ಆಯ್ಕೆಯಾದರು. ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಧಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾ ಅಧಿಕಾರಿ ಸುದೀಪ್ ಘೋಷಣೆ ಮಾಡಿದರು.
ಈ ಹಿಂದಿನ ಅಧ್ಯಕ್ಷ ಸಿ.ಕೆ. ಉದಯಕುಮಾರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಅಧ್ಯಕ್ಷರ ಆಯ್ಕೆ ಹಿನ್ನಲೆಯಲ್ಲಿ ತೊರೆನೂರಿನಲ್ಲಿ ಸಂಭ್ರಮಾಚರಣೆ ನಡೆಯಿತು.
ಈ ಸಂದರ್ಭ ಹಾಜರಿದ್ದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷರಿಗೆ ಶುಭ ಕೋರಿದರು.
ಸಂಘದ ಉಪಾಧ್ಯಕ್ಷೆ ಗೌರಮಣಿ, ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆಪಿಸಿಸಿ ಸದಸ್ಯ ನಟೇಶ್ ಗೌಡ, ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ, ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ ಅರುಣ್ ರಾವ್ ಮತ್ತಿತರರು ಇದ್ದರು.