ಸಿಎಂ ಸ್ಥಾನಕ್ಕೆ ಸತೀಶ ಜಾರಕಿಹೊಳಿ ಸೂಕ್ತ ವ್ಯಕ್ತಿ; ಶಾಸಕ ವಿಶ್ವಾಸ ವೈದ್ಯ

VishwasVaidyaMLA2023.jpg
Published on

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರವಧಿ ಪೂರ್ಣಗೊಳಿಸಲಿದ್ದಾರೆ. ಅವರ ಬದಲಾವಣೆ ಯ ಪ್ರಶ್ನೆಯೇ ಇಲ್ಲ ಎಂದು ಸವದತ್ತಿ ಕ್ಷೇತ್ರದ ಕಾಂಗ್ರೆಸ್ ಶಾಸಕ‌ ವಿಶ್ವಾಸ ವೈದ್ಯ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ. ಸಿದ್ದರಾಮಯ್ಯ ಅವರೇ ಮುಂದುವರಿಯಲಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದವರು ಮುಖ್ಯಮಂತ್ರಿ ಆಗಬೇಕಾದರೆ ಸಚಿವ ಸತೀಶ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net