

ಬೆಳಗಾವಿ: ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ಮೈದಾನದಲ್ಲಿ ಭಾನುವಾರ ಜರುಗಿದ 24ನೇ ವಿತಾವಿ ಅಂತರ ವಿದ್ಯಾಲಯ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು.
ಅಂತಾರಾಷ್ಟ್ರೀಯ ಕ್ರೀಡಾಪಟುಸಹನಾ ಕುಮಾರಿ, ನಾಗರಾಜ ಬಿ.ಜಿ. ಚಾಲನೆ ನೀಡಿದರು. ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ ಎಸ್. ಕ್ರೀಡಾಕೂಟ ದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯದ ವಿವಿದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.